ಕಾರವಾರ: ಮಾರ್ಚ 23 -ಸ್ವತಂತ್ರ ಪೂರ್ವದಲ್ಲಿ ನಡೆದ ದಂಡಿ-ಉಪ್ಪಿನ ಸತ್ಯಾಗ್ರಹದ ಬಗ್ಗೆ ಸಿನಿಮಾವೊಂದು ಮೂಡಿಬರುತ್ತಿದೆ. ತಾರಾ, ಸುಚೇಂದ್ರ ಪ್ರಸಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ವಿಶಾಲ ರಾಜ್ ನಿರ್ದೇಶನವಿದ್ದು, ಹೊನ್ನಾವರದಲ್ಲಿ ಚಾಲನೆ ದೊರಕಿದೆ.
ಡಾ ರಾಜಶೇಖರ ಮಠಪತಿ ಅವರ ಕಾದಂಬರಿ ಆಧರಿಸಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಹೊನ್ನಾವರದ ಮೂಡ ಗಣಪತಿ ದೇವಸ್ಥಾನದಲ್ಲಿ ಪದ್ಮಶ್ರೀ ಸುಕ್ರಿ ಗೌಡ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
ಹೊನ್ನಾವರ, ಸಿದ್ದಾಪುರ, ಅಂಕೋಲಾ ಸುತ್ತಮುತ್ತ ಮೂವತ್ತು ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಕಲ್ಯಾಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ ಅವರು ಚಿತ್ರ ನಿರ್ಮಿಸುತ್ತಿತದ್ದಾರೆ.
ವಿಶಾಲ ರಾಜ್ ಅವರೆ ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ವೆಂಕಟೇಶ ಅವರ ಛಾಯಾಗ್ರಹಣವಿದೆ.
ಸಾಹಿತ್ಯ ಹಾಗೂ ಸಂಭಾಷಣೆಯನ್ನು ರಾಗಂ ಅವರು ಬರೆದಿದ್ದು, ರಾಮ ಕ್ರಿಶ್ ಸಂಗೀತ ನೀಡುತ್ತಿದ್ದಾರೆ. ರಾಷ್ಟಪ್ರಶಸ್ತಿ ವಜೇತ ನಟಿ ತಾರಾ ಹಾಗೂ ಸುಚೀಂದ್ರ ಪ್ರಸಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ನೂತನ ಪ್ರತಿಭೆಗಳಾದ ಯುವಾನ್ ದೇವ(ನಿರ್ಮಾಪಕರ ಪುತ್ರ) ಹಾಗೂ ಶಾಲಿನಿ ಭಟ್ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಾಮೋದರ ನಾಯ್ಡು ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಉತ್ತರ ಕನ್ನಡದ ಸ್ವಾತಂತ್ರ್ಯ ಹೋರಾಟಗಾರರಿಗೆ ಈ ಚಿತ್ರ ಸಮರ್ಪಣೆಯಾಗಲಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಈ ಶುಭ ಸಂದರ್ಭದಲ್ಲಿ ಈ ಚಿತ್ರವನ್ನು ತೆರೆಗೆ ತರಲು ನಿರ್ದೇಶಕರು ಮುಂದಾಗಿದ್ದಾರೆ.