ಬೆಂಗಳೂರು, ಮಾ 25 – ಸಿಡಿ ಪ್ರಕರಣದ ಯುವತಿಯು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆ ನಡೆಯುತ್ತಿರುವಾಗ ಹಲವು ತಿರುವುಗಳು ಎದುರಾಗುತ್ತವೆ. ಹಲವು ಬೆಳವಣಿಗೆಗಳು ನಡೆಯುತ್ತವೆ. ಆದರೆ ಎಸ್ಐಟಿ ತನಿಖೆ ಯಾರ ಪರವಾಗಿಯೂ ಇಲ್ಲ, ಯಾರ ವಿರುದ್ಧವಾಗಿಯೂ ಇಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ಆ ಮಹಿಳೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಸಿದ್ಧವಿದೆ. ಆ ಮಹಿಳೆ ಎಲ್ಲಿದ್ದಾಳೆ ಎಂಬುದನ್ನು ತಿಳಿಸಿದರೆ ಅವರ ಬಳಿಯೇ ಹೋಗಿ ನಾವು ಹೇಳಿಕೆಯನ್ನು ಪಡೆದುಕೊಳ್ಳುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.