ಬೆಂಗಳೂರು, ಮಾ 25- ಸಿಡಿ ಯುವತಿಗೆ ರಕ್ಷಣೆ ನೀಡುವಲ್ಲಿ ನಾವು ಯಾವುದೇ ಹಿಂದೇಟು ಹಾಕುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.
ವಿಕಾಸೌಧದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಯುವತಿ ಹೊಸ ವಿಡಿಯೋದಲ್ಲಿ ಏನು ಹೇಳಿದ್ದಾರೆ ನೋಡಿಲ್ಲ. ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡುವುದಾಗಿ ಸದನದಲ್ಲೇ ಹೇಳಿದ್ದಾರೆ.
ಬೊಮ್ಮಾಯಿಯವರು ಮತ್ತು ಸ್ವತಃ ಮುಖ್ಯಮಂತ್ರಿ ಗಳು ಆಕೆಗೆ ರಕ್ಷಣೆ ನೀಡುವುದಾಗಿ ಹೇಳಿದ್ದಾರೆ. ನಮ್ಮಿಂದ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ ಎಂದರು.
ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಸರ್ಕಾರ ಯುವತಿಗೆ ರಕ್ಷಣೆ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ತನಿಖೆಯ ವರದಿ ಏನೇ ಬರಲಿ ಯುವತಿಗೆ ರಕ್ಷಣೆ ನೀಡುವುದರಲ್ಲಿ ಯಾವುದೇ ಹಿಂದೇಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹೆಣ್ಣು ಮಗಳಿಗೆ ಅನ್ಯಾಯ ಆಗಿದೆಯಾ ಅನ್ನುವುದು ತನಿಖೆ ಆದ ಮೇಲೆ ಗೊತ್ತಾಗುತ್ತದೆ. ಅವರಿಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ. ಅದನ್ನು ಮಾಡ್ತೇವೆ. ಸರ್ಕಾರವೂ ಈ ಸಂಬಂಧ ತನಿಖೆ ನಡೆಸುತ್ತಿದ್ದು ಆ ಯುವತಿಯ ಹುಡುಕಾಟದಲ್ಲಿದೆ. ಆ ಯುವತಿ ನನ್ನ ಇಲಾಖೆಯಿಂದ ರಕ್ಷಣೆ ಕೇಳಿದ್ದರೂ ನಮ್ಮ ಕಡೆಯಿಂದಲೂ ರಕ್ಷಣೆ ಕೊಡಲು ಉತ್ತಮ ಖಂಡಿತ ಎಂದು ತಿಳಿಸಿದರು.