ಬೆಂಗಳೂರು, ಮಾ.25 – ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ವಿಡಿಯೋದಲ್ಲಿ ಹೇಳುತ್ತಿರುವುದು ಎಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ನೀಡಿಲ್ಲ ಎಂದು ಎಸ್ ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಸ್ಪಷ್ಟಪಡಿಸಿದ್ದಾರೆ.
ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಯುವತಿಗೆ 5 ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿಲ್ಲ . ಯುವತಿ ಇದ್ದ ಸ್ಥಳದಲ್ಲೇ ವಿಚಾರಣೆ ಮಾಡುವುದಾಗಿಯೂ ಭರವಸೆ ನೀಡಿದ್ದೇವು. ಆದರೂ, ಯುವತಿ ಇದೂವರೆಗೂ ತಾನಿರುವ ಸ್ಥಳದ ಮಾಹಿತಿ ಬಿಟ್ಟುಕೊಟ್ಟಿಲ್ಲ ಎಂದರು.