ಬೆಂಗಳೂರು, ಮಾ.31- ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಸಂತ್ರಸ್ತ ಯುವತಿಯನ್ನು ಬುಧವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇಂದು ಬೆಳಗ್ಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಂದ ಸಂತ್ರಸ್ತ ಯುವತಿಗೆ ಮೆಡಿಕಲ್ ಪರೀಕ್ಷೆ ಮಾಡಲಾಯಿತು.
ಸುಮಾರು 1 ಗಂಟೆಗಳ ಕಾಲ ಯುವತಿಯನ್ನು ಕೋವಿಡ್ -19 ಪರೀಕ್ಷೆ, ಬಿಪಿ ಶುಗರ್ ಸೇರಿ ಹಲವು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆತಂದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಸ್ಥಳದಲ್ಲಿ ಸುಮಾರು 20ಕ್ಕೂ ಹೆಚ್ಚು ಜನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಈ ವೇಳೆ ಎಸ್ಐಟಿ ತನಿಖಾಧಿಕಾರಿ ಕವಿತಾ ಕೂಡ ಉಪಸ್ಥಿತರಿದ್ದರು.