ಬೆಂಗಳೂರು, ಮಾ 31 – ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಕೊರೋನಾ ಸೋಂಕು ಮತ್ತೆ ಪರೀಕ್ಷೆಗೆ ಒಳಗಾಗಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರಿಗೂ ಕೋರೋನ ಸೋಂಕು ತಗುಲಿರುವುದು ಖಚಿತವಾಗಿದೆ. ಇಬ್ಬರೂ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಮಾಜಿ ಪ್ರಧಾನಿ ದೇವೇಗೌಡರೇ ಸ್ವತ: ಟ್ವೀಟ್ ಮಾಡಿ ನಾವಿಬ್ಬರೂ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು ವೈದ್ಯಕೀಯ ವರದಿಗಳ ಪ್ರಕಾರ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಮ್ಮ ಜೊತೆ ಸಂಪರ್ಕಕ್ಕೆ ಬಂದವರು, ಆರೋಗ್ಯದ ಕಡೆ ಗಮನಹರಿಸಬೇಕು ಮತ್ತು ಮುಂದಿನ ಹದಿನೈದು ಇಪ್ಪತ್ತು ದಿನಗಳ ಕಾಲ ಯಾರು ನಮ್ಮ ಭೇಟಿಗೆ ಪ್ರಯತ್ನ ಮಾಡಬಾರದು ಎಂದು ದೇವೇಗೌಡರು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಹೀಗಾಗಿ ನಾವಿಬ್ಬರು ಕಳೆದ ಕೆಲವು ದಿನಗಳ ಮಟ್ಟಿದೆ ಪ್ರತ್ಯೇಕವಾಗಿರಲಿದ್ದು ನಮ್ಮ ಭೇಟಿಗೆ ಯಾರೊಬ್ಬರು ಪ್ರಯತ್ನ ಮಾಡವಾರದು ಎಂದು ಹೇಳಿದ್ದಾರೆ. ದೇಶದ ಕೆಲವು ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ ಅದರಂತೆ ಕಳೆದ ಒಂದು ವಾರದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.