ಬೆಂಗಳೂರು, 6-ಯಾವುದೇ ಕಾರಣಕ್ಕೂ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ. 6ನೇ ವೇತನ ಆಯೋಗದಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲೂ ಸಾಧ್ಯವಿಲ್ಲ, ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ನೌಕರರನ್ನು ಮನವೊಲಿಕೆಗೆ ಪ್ರಯತ್ನ ಮಾಡುವುದೂ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ 4 ಸಾರಿಗೆ ನಿಗಮಗಳ ಎಂಡಿಗಳೊಂದಿಗೆ ಮಹತ್ವದ ಸಭೆ ನಡೆಯಿತು.ಮುಖ್ಯಮಂತ್ರಿಗಳ ಸಭೆಯ ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿಎಸ್ ರವಿಕುಮಾರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ನಾಳೆ ಬುಧವಾರ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸಾರಿಗೆ ಬಸ್ ಗಳನ್ನು ಹಾನಿಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅವು ಸಾರ್ವಜನಿಕ ಸೊತ್ತು. ಅವುಗಳಿಗೆ ಹಾನಿಯಾದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮುಷ್ಕರ ನಿರತರ ನೌಕರರು ಕೆಲಸಕ್ಕೆ ಹಾಜರಾಗದಿದ್ದರೇ ವೇತನ ಕಡಿತಗೊಳಿಸಲಾಗುವ ನಿಯಮ ಕೂಡ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದರು.
ಮುಷ್ಕರದಿಂದ ಪ್ರಯಾಣಿಕರಿಗಾಗುವ ತೊಂದರೆ ತಪ್ಪಿಸಲು ಪರ್ಯಾಯ ವ್ಯವಸ್ಥೆ ಅನುಸಲಾಗುವದು. ಪ್ರತಿಭಟನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು.