ಜಕಾರ್ತಾ, ಜ 11- ಇಂಡೋನೇಷ್ಯಾದ ಜಾವಾ ದ್ವೀಪದ ಪಶ್ಚಿಮ ಭಾಗದಲ್ಲಿ ಕಳೆದ ವಾರ ಸಂಭವಿಸಿದ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದ್ದು, ಇನ್ನೂ 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರಿ ನಿಯಂತ್ರಣದ ಆಂಟಾರಾ ಸುದ್ದಿ ಸಂಸ್ಥೆ ಸೋಮವಾರ ವರದಿ ಮಾಡಿದೆ.
ಶನಿವಾರ, ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಭೂಕುಸಿತಗಳು ಸಂಭವಿಸಿದ್ದವು. ಘಟನೆಗಳ ನಂತರ, ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಇಂಡೋನೇಷ್ಯಾ ವಿಪತ್ತು ನಿರ್ವಹಣೆಯ ರಾಷ್ಟ್ರೀಯ ಮಂಡಳಿ ತಿಳಿಸಿತ್ತು. ಭೂಕುಸಿತ ಘಟನೆಗಳಲ್ಲಿ 25 ಜನರನ್ನು ರಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.
2020 ರ ಆರಂಭದಲ್ಲಿ, ಪಶ್ಚಿಮ ಜಾವಾದಲ್ಲಿ ಭೂಕುಸಿತಗಳಿಂದ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. 1,70,000 ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು.