INDIA COVID-19 Statistics

13,871,321
Confirmed Cases
Updated on 14/04/2021 12:30 AM
1,366,518
Total active cases
Updated on 14/04/2021 12:30 AM
172,115
Total deaths
Updated on 14/04/2021 12:30 AM
Wednesday, April 14, 2021

INDIA COVID-19 Statistics

13,871,321
Total confirmed cases
Updated on 14/04/2021 12:30 AM
1,366,518
Total active cases
Updated on 14/04/2021 12:30 AM
172,115
Total deaths
Updated on 14/04/2021 12:30 AM
12,332,688
Total recovered
Updated on 14/04/2021 12:30 AM
Home State Bengaluru ಆಫ್‌ಲೈನ್‌ ಅಥವಾ ಆನ್‌ಲೈನ್‌ ಹಾಜರಿ ಕಡ್ಡಾಯ

ಆಫ್‌ಲೈನ್‌ ಅಥವಾ ಆನ್‌ಲೈನ್‌ ಹಾಜರಿ ಕಡ್ಡಾಯ

ಬೆಂಗಳೂರು,ಜ 12-ಇದೇ ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನೀಯರಿಂಗ್‌ ಆಫ್‌ಲೈನ್‌ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ಅವರು,ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿ ಮೀರುವಂತಿಲ್ಲ. ಶಿಕ್ಷಣ ಸಂಸ್ಥೆಗಳ ಜತೆಗೆ ವಿದ್ಯಾರ್ಥಿಗಳು ಕೂಡ ಪಾಲಿಸಬೇಕು. ಇನ್ನು ವಿದ್ಯಾರ್ಥಿಗಳು ನೇರ ತರಗತಿಗಳಿಗೂ ಹಾಜರಾಗಬಹುದು ಅಥವಾ ಆನ್‌ಲೈನ್‌ ತರಗತಿಗೂ ಹಾಜರಾಗಬಹುದು. ಆ ಆಯ್ಕೆ ವಿದ್ಯಾರ್ಥಿಗಳಿಗೇ ಇರುತ್ತದೆ. ಎರಡರಲ್ಲಿ ಒಂದಕ್ಕೆ ಹಾಜರಾತಿ ಕಡ್ಡಾಯ ಎಂದು ಅವರು ಹೇಳಿದರು.

ನೂತನ ಮಾರ್ಗದರ್ಶಿ ಸೂತ್ರಗಳು :
ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಕಡ್ಡಾಯವಾ ಗಿ ಒಪ್ಪಿಗೆ ಪತ್ರ ತರಬೇಕು. ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರುವುದಿಲ್ಲ.

ಮಾರ್ಗಸೂಚಿಯಂತೆ ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಬೇಕು. ಈ ನಿಟ್ಟಿ ನಲ್ಲಿ ಆರೋಗ್ಯ ಇಲಾಖೆಯ ನಿಯಮಗಳನ್ನು ಮೀರುವಂತಿಲ್ಲ. ದೈಹಿಕ ಅಂತರ ಕಡ್ಡಾಯ. ತರಗತಿ ವೇಳಾಪಟ್ಟಿ ಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿಕೊಳ್ಳಬೇಕು.

ಬೋಧನಾ, ಪ್ರಾಕ್ಟಿಕಲ್‌, ಪ್ರಾಜೆಕ್ಟ್‌ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು.

ನೇರ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗಬಹುದು. ಇಂಥ ವಿದ್ಯಾರ್ಥಿಗಳಿಗೆ ಪಠ್ಯದ ಬಗ್ಗೆ ಇರುವ ಅನುಮಾನ,ಗೊಂದಲಗಳನ್ನು ನಿವಾರಿಸಲು ಪ್ರತಿದಿನ ಭೌತಿಕ ಸಂಪ ರ್ಕ ತರಗತಿಗಳನ್ನು(Contact Classes) ನಡೆಸಬಹುದು.ಇಂಥ ಸಂಪರ್ಕ ತರಗತಿಗಳನ್ನು ನಡೆಸುವಾಗಲೂ ಆ ರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು.ಪ್ರತಿ ಹಂತದಲ್ಲೂ ದೈಹಿಕ ಅಂತರ ಬಹಳ ಮುಖ್ಯವಾಗಿರುತ್ತದೆ.

ಎಲ್ಲ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಇಂದು ತಿಂಗಳ ಕಾಲ ಪ್ರತಿ ತರಗತಿಗೆ ಸಂಬಂಧಿಸಿದ ಅಧ್ಯಯನ ಸಾಮಗ್ರಿಯನ್ನು ವಾಟ್ಸಾಪ್‌,ಇಮೇಲ್‌ ಅಥವಾ ಟೆಲಿಗ್ರಾಂ ಮೂ ಲಕ ಕಳಿಸಬೇಕು.ಇದು ಕಡ್ಡಾಯ.ಜತೆಗೆ,ವಿಡಿಯೋ ಪಾಠಗಳು, ಪವರ್‌ ಪಾಯಂಟ್‌ ಪ್ರೆಸೆಂಟೇಶನ್‌, ಇ-ಪುಸ್ತಕ, ಇ -ನೋಟ್ಸ್‌, ಆಡಿಯೋ ಪುಸ್ತಕ,ಅಭ್ಯಾಸ ಪ್ರಶ್ನೆಗಳನ್ನು ಇತ್ಯಾದಿ ಅಧ್ಯಯನ ಸಾಮಗ್ರಿಯನ್ನು ಕಡ್ಡಾಯವಾಗಿ ಕಾಲೇಜ‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು.

ಇನ್ನು ಆನ್‌ಲೈನ್‌ ಅಥವಾ ಆಫ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಆನ್‌ ಕ್ಯಾಂಪಸ್‌ ಮತ್ತು ಆಫ್‌ ಕ್ಯಾಂಪಸ್‌ ಹಾಸ್ಟೆಲುಗಳಲ್ಲಿ ಉಳಿದುಕೊಳ್ಳಬಹುದು.

ತರಗತಿಗಳ ಆರಂಭಕ್ಕೆ ಮುನ್ನ ಕಾಲೇಜಿನ ಕಟ್ಟಡ,ಮುಖ್ಯದ್ವಾರ,ಗ್ರಂಥಾಲಯ,ಶೌಚಾಲಯ,ಕೊಠಡಿ,ಪೀಠೋ ಪಕರಣ ಹಾಗೂ ಆಧ್ಯಯನ ಪುಸ್ತಕಗಳನ್ನು ಸ್ಯಾನಿಟೈಸ್‌ ಮಾಡಬೇಕು. ಜತೆಗೆ,ದ್ವಾರದಲ್ಲಿಯೇ ಎಲ್ಲರ ಥರ್ಮಲ್‌ ಸ್ಕೀನಿಂಗ್‌ ಹಾಗೂ ಸ್ಯಾನಿಟೈಸ್‌ ವ್ಯವಸ್ಥೆ ಕಡ್ಡಾಯ.

ಎಲ್ಲ ವಿದ್ಯಾರ್ಥಿಗಳು, ಬೋಧಕರು,ಬೋಧಕೇತರ ಸಿಬ್ಬಂದಿ ಕೋವಿಡ್-‌೧೯ ಪರೀಕ್ಷೆಗೆ ಒಳಪಡುವ ಅಗತ್ಯವಿಲ್ಲ. ಆದರೆ,ಕೋವಿಡ್‌ ಲಕ್ಷಣಗಳು ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.ಹತ್ತಿರದಲ್ಲೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳೊಂದಿಗೆ ಎಲ್ಲ ಕಾಲೇಜುಗಳು ಮ್ಯಾಪಿಂಗ್‌ ಮಾಡಿಕೊಳ್ಳಬೇಕು.

ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ.೫೦ ಮೀರುವಂತಿಲ್ಲ. ಒಂದು ಹಾಜರಾತಿ ಹೆಚ್ಚಿದರೆ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಬೇಕು.ನೇರ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರು ತಂದುಕೊಳ್ಳಬೇಕು. ಮಾಸ್ಕ‌, ಸ್ಯಾನಿಟೈಸರ್‌ ಕೂಡ ಕಡ್ಡಾಯ. ಬೋಧಕರಿಗೂ,ಇತರೆ ಎಲ್ಲ ಸಿಬ್ಬಂದಿಗೂ ಇದು ಅನ್ವಯವಾಗುತ್ತದೆ.
ಲೈಬ್ರರಿ,ಕ್ಯಾಂಟೀನ್‌ ಆರಂಭಕ್ಕೆ ಅಡ್ಡಿ ಇಲ್ಲ. ಆದರೆ ಮಾರ್ಗಸೂಚಿ ಮೀರುವಂತಿಲ್ಲ. ಜತೆಗೆ, ಎನ್‌ಎಸ್‌ಎಸ್‌ ಹಾಗೂ ಎನ್‌ಸಿಸಿ ಚಟುವಟಿಕೆಗಳನ್ನು ಕೋವಿಡ್‌ ಮಾರ್ಗಸೂಚಿಯಂತೆ ಆರಂಭಿಸಬಹುದು.

ನೂತನ ಮಾರ್ಗಸೂಚಿಯ ವಿವರವಾದ ಕರಡನ್ನು ಎಲ್ಲ ಶಿಕ್ಷಣ ಸಂಸ್ಥೆ,ಕಾಲೇಜುಗಳಿಗೆ ಕಳಿಸಲಾಗಿದ್ದು, ಆಯಾ ಸಂಸ್ಥೆಗಳ ಆಡಳತ ಮಂಡಳಿ, ಪ್ರಾಂಶುಪಾಲರು ಕೂಲಂಕಷವಾಗಿ ಗಮನಿಸಿ ಜಾರಿ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

State

ರಮಜಾನ‌ ; ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು, ಏ 13- ಮುಸ್ಲಿಮರ ಪವಿತ್ರ ರಮಜಾನ ಉಪವಾಸ ಮಾಸ ಇಂದಿನಿಂದ ಆರಂಭವಾಗಲಿದ್ದು ಒಂದು ತಿಂಗಳ ಕಾಲ ಈ ಆಚರಣೆ ಇರಲಿದೆ. ಇದಕ್ಕಾಗಿ ಕೊರೊನಾ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕಂಟೈನ್...

ಕೋವಿಡ್ ಕುರಿತು ಸರ್ವಪಕ್ಷ ಸಭೆ- ಮುಖ್ಯಮಂತ್ರಿ

ಬೀದರ, ಏಪ್ರಿಲ್ 13 - ಕೋವಿಡ್ ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ...

ಗೋಕಾಕ ತಾಲೂಕಿನಲ್ಲಿ ಬಾಲಚಂದ್ರ ಜಾರಕಿಹೊಳಿ ಪ್ರಚಾರ

ಬೆಳಗಾವಿ, 11- ಕಳೆದ ಕೆಲ ದಿನಗಳಿಂದ ಕೆಲಸದ ಒತ್ತಡದ ನಿಮಿತ ಚುನಾವಣೆ ಪ್ರಚಾರ ಮಾಡಲು ಆಗಿರಲಿಲ್ಲ, ನಾಳೆಯಿಂದಲೇ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಪ್ರಚಾರ ಆರಂಭಿಸುವದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ...

ಅಂಗಡಿ ಸಂಸದರಾಗಿ ಅನುದಾನ ತಂದದೆಷ್ಟು, ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೊಪ್ಪಳ, 11-ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅನನುಭವಸ್ಥರು, ಸಂಸತ್ ನಲ್ಲಿ ಅವರು ಹೇಗೆ ವಿಷಯ ಪ್ರಸ್ತಾಪಿಸುತ್ತಾರರೆಂದಿದ್ದ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ದಿ. ಸುರೇಶ ಅಂಗಡಿ ನಾಲ್ಕು ಅವಧಿಗೆ ಸಂಸದರಾಗಿ ಎಷ್ಟು ಅನುಧಾನ ರಾಜ್ಯಕ್ಕೆ...

National

ಗುಜರಾತ‌ ಹಿಂಸಾಚಾರ; ಮೋದಿಗೆ ಕ್ಲೀನ‌ಚಿಟ್‌ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ, ಏ 13- ಗುಜರಾತ್ ಗಲಭೆ ಪ್ರಕರಣದಲ್ಲಿ 2002ರಲ್ಲಿ ಅಂದಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ, ಹಾಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ್ದ ಕ್ಲೀನ್‌ ಚಿಟ್‌ ಪ್ರಶ್ನಿಸಿ...

24 ಗಂಟೆಯಲ್ಲಿ 1.61 ಲಕ್ಷ ಜನರಿಗೆ ಕೊರೋನಾ; 879 ಸಾವು

ನವದೆಹಲಿ, ಏ 13 - ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು. ಕಳೆದ 24 ಗಂಟೆಯಲ್ಲಿ 1,61,ಲಕ್ಷ ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಈಗ ಸೋಂಕಿತರ ಸಂಖ್ಯೆ...

ಸತ್ಯಮಂಗಲಂ ಅರಣ್ಯದಲ್ಲಿ ಭಾರಿ ನಿಧಿ; ವೀರಪ್ಪನ್ ಪುತ್ರಿಯ ಹೇಳಿಕೆ

ಚೆನ್ನೈ, ಏ 11- ದಂತ ಚೋರ, ಕಾಡು ಕಳ್ಳ ವೀರಪ್ಪನ್ ನೆಲೆಸಿದ್ದ ಸತ್ಯಮಂಗಲಂ ಅರಣ್ಯ ಪ್ರದೇಶದಲ್ಲಿ ಬೃಹತ್ ಪ್ರಮಾಣದ ಹಣ ಅಡಗಿಸಿಟ್ಟಿದ್ದಾನೆ ಎಂದು ಆತನ ಪುತ್ರಿ ವಿಜಯಲಕ್ಷ್ಮಿ ಹೇಳಿರುವುದು ಸಂಚಲನ ಸೃಷ್ಟಿಸಿದೆ. ವಾಲ್ಮುರಿಮಾಯಿ ಕಚ್ಚಿಯಲ್ಲಿ...

ನಟ ಸತೀಶ ಕೌಲ್ ಕೊರೋನಾಗೆ ಬಲಿ

ಚಂಡಿಗಡ, ಏಪ್ರಿಲ್ 10- ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ನಟ ಸತೀಶ ಕೌಲ್ ಶನಿವಾರ ಲುಧಿಯಾನದಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸೋಂಕು ಪತ್ತೆಯ ನಂತರ ಸತೀಶ ಕೌಲ್ ರನ್ನು ಲುಧಿಯಾನಾದ ಖಾಸಗಿ...

International

30 ವರ್ಷದಿಂದ ಬೆಳೆಸಿದ್ದ ಉಗುರಿಗೆ ಕತ್ತರಿ

ಟೆಕ್ಸಾಸ್, 9- ದಾಖಲೆಗಾಗಿಯೋ ಶೋಕಿಗಾಗಿಯೋ 30 ವರುಷಗಳಿಂದ ಬೆಳೆಸಿಕೊಂಡು ಬಂದಿದ್ದ ತಮ್ಮ ಕೈ ಉಗುರುಗಳನ್ನು ಅಮೆರಿಕಾದ ಅಯನ್ನಾ ವಿಲಿಯಮ್ಸ ಎಂಬವರು‌ ಕತ್ತರಿಸಿಕೊಂಡು ಜಗತ್ತಿನ ಗಮನ ಸೆಳೆದಿದ್ದಾರೆ. ಅಯನ್ನಾ ಅವರು ಕಳೆದ ಮೂವತ್ತು ವರ್ಷಗಳಿಂದ ತಮ್ಮ...

ಕೋವಿಡ್ ಲಸಿಕೆ ನಂತರವೂ 63 ಜನರ ಸಾವು

ವಿಯೆನ್ನಾ ಏಪ್ರಿಲ್ 8 - ಆಸ್ಟ್ರಿಯಾದಲ್ಲಿ ಕರೋನ ಸೋಂಕಿನ ಲಸಿಕೆ ಪಡೆದ ನಂತರವೂ 63 ಜನರು ಮೃತಪಟ್ಟಿದ್ದಾರೆ ಎಂದು ಆಸ್ಟ್ರಿಯನ್ ಸರ್ಕಾರಿ ವಕ್ತಾರರು ಹೇಳಿದ್ದಾರೆ. ಕಳೆದ ವಾರ ಕರೋನ ಸೋಂಕಿನ ವಿರುದ್ಧ ಲಸಿಕೆ ಹಾಕಿದ...

ವಾರದಲ್ಲಿ ಕೋವಿಡ್ ಶೇ 5ರಷ್ಟು, ಸಾವಿನ ಸಂಖ್ಯೆ ಶೇ 11ರಷ್ಟು ಏರಿಕೆ

ಮಾಸ್ಕೋ, ಏಪ್ರಿಲ್ 7- ಕಳೆದೊಂದು ವಾರದಲ್ಲಿ ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 5ರಷ್ಟು, ಸಾವಿನ ಸಂಖ್ಯೆ ಶೇ 11ರಷ್ಟು ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಓ) ವಾರದ ವರದಿ ತಿಳಿಸಿದೆ. ‘ಜಾಗತಿಕವಾಗಿ...

ನಾವಿನ್ನೂ ಸಾವು ಬದುಕಿನ ಹೋರಾಟದಲ್ಲಿದ್ದೇವೆ

ವಾಷಿಂಗ್ಟನ್, ಏ 7- ಕೊರೊನಾ ಸಾಂಕ್ರಾಮಿಕ ವಿಷಯದಲ್ಲಿ ಅಮೆರಿಕಾ ಈಗಲೂ ಸಾವು ಬದುಕಿನ ನಡುವಿನ ಸ್ಪರ್ಧೆಯಲ್ಲಿದೆ ಎಂದು ಅಮೇರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಹಾಗಾಗಿ ಕೊರೊನಾ ಸಾಂಕ್ರಾಮಿಕ ಪ್ರಸರಣ ತಡೆಗಟ್ಟಲು ಜನರು ಕಟ್ಟುನಿಟ್ಟಿನ...

Entertainment

ರಜನಿಕಾಂತಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ

ನವದೆಹಲಿ, ಎ 1- ಹೆಸರಾಂತ ಚಿತ್ರನಟ ರಜನಿಕಾಂತ ಅವರಿಗೆ ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ ಜಾವಡೇಕರ ಈ ಬಗ್ಗೆ ಟ್ವೀಟ್ ಮಾಡಿ...

“90 ಹೊಡಿ ಮನೀಗ್ ನಡಿ” ಚಿತ್ರೀಕರಣ ಮುಕ್ತಾಯ

ಬೆಂಗಳೂರು, ಮಾರ್ಚ 31- ಹಾಸ್ಯ ನಟ ವೈಜನಾಥ ಬಿರಾದಾರ್ ಅಭಿನಯದ ಹಾಸ್ಯ ಪ್ರಧಾನ "90 ಹೊಡಿ ಮನೀಗ್ ನಡಿ" ಚಿತ್ರ ಇತ್ತೀಚೆಗೆ ಚಿತ್ರೀಕರಣ ಮುಕ್ತಾಯಗೊಳಿಸಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮುಗಿಸಿಕೊಂಡಿದೆ. "ಅಮ್ಮ ಟಾಕೀಸ ಬಾಗಲಕೋಟ"...

“ದಂಡಿ” ಚಿತ್ರಕ್ಕೆ ಚಾಲನೆ

ಕಾರವಾರ: ಮಾರ್ಚ 23 -ಸ್ವತಂತ್ರ ಪೂರ್ವದಲ್ಲಿ ನಡೆದ‌ ದಂಡಿ-ಉಪ್ಪಿನ ಸತ್ಯಾಗ್ರಹದ ಬಗ್ಗೆ ಸಿನಿಮಾವೊಂದು ಮೂಡಿ‌ಬರುತ್ತಿದೆ. ತಾರಾ, ಸುಚೇಂದ್ರ ಪ್ರಸಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ವಿಶಾಲ ರಾಜ್ ನಿರ್ದೇಶನವಿದ್ದು, ಹೊನ್ನಾವರದಲ್ಲಿ ಚಾಲನೆ...

“ತಾಜಮಹಲ್-2” ಚಿತ್ರೀಕರಣ ಮುಕ್ತಾಯ

ಬೆಂಗಳೂರು: ಮಾರ್ಚ 23- ಈ ಹಿಂದೆ ಡೇಂಜರ್‌ಜೋನ್, ನಿಶ್ಯಬ್ದ 2, ಅನುಷ್ಕದಂಥ ಚಿತ್ರಗಳನ್ನು ನಿರ್ದೇಶಿಸಿದ್ದ ದೇವರಾಜಕುಮಾರ ಅವರ ಸಾರಥ್ಯದ "ತಾಜ್‌ಮಹಲ್-2" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಎಚ್‌ಎಂಟಿ ಏರಿಯಾದಲ್ಲಿ ಸೆಟ್ ಹಾಕಿ ಜೀವ ಬಿಡುವೆ...

Sports

ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಕೃನಾಲ್, ಕನ್ನಡಿಗ ಪ್ರಸಿದ್ಧ

ಪುಣೆ, ಮಾ.23 - ಆಲ್‌ರೌಂಡರ್ ಕೃನಾಲ್ ಪಾಂಡ್ಯ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ಅವರು ಮಂಗಳವಾರ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪರ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. ಭಾರತಕ್ಕಾಗಿ 18...

ಸ್ಪಿನ್ ದಾಳಿಗೆ ಇಂಗ್ಲೆಂಡ ಪತನ; ಐಸಿಸಿ ಫೈನಲ್ ಗೆ ಭಾರತ

ಅಹಮದಾಬಾದ್, ಮಾ.6 - ಅನುಭವಿ ಸ್ಪಿನ್ ಬೌಲರ್ ಆರ್.ಅಶ್ವಿನ್ ಹಾಗೂ ಅಕ್ಷರ ಪಟೇಲ್ ಅವರ ಕರಾರುವಾಕ್ ದಾಳಿಗೆ ನಲುಗಿದ ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 25 ರನ್ ಗಳಿಂದ ಸೋಲು...

ರಿಷಭ ಪಂತ್ ಶತಕ; ಭಾರತದ ಮುನ್ನಡೆ

ಅಹಮದಾಬಾದ್, ಮಾ.5- ರಿಷಭ ಪಂತ್ (101) ಬಾರಿಸಿದ ಶತಕ ಹಾಗೂ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (ಅಜೇಯ 60) ಅವರ ಅರ್ಧಶತಕದ ಬಲದಿಂದ ಭಾರತ ಕ್ರಿಕೆಟ್ ತಂಡ ಇಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್...

ಭಾರತದ ಸ್ಪಿನ್ ಬಲೆಗೆ ಬಿದ್ದ ಇಂಗ್ಲೆಂಡ್

ಅಹಮದಾಬಾದ್, ಮಾ.4 - ಸ್ಪಿನ್ ಬೌಲರ್ ಗಳಾದ ಅಕ್ಷರ ಪಟೇಲ (68ಕ್ಕೆ 4) ಹಾಗೂ ಆರ್.ಅಶ್ವಿನ್ (47ಕ್ಕೆ 3) ಅವರ ಬಿಗುವಿನ ದಾಳಿಗೆ ಪ್ರವಾಸಿ ಇಂಗ್ಲೆಂಡ್ ತಂಡ ನಲುಗಿದ್ದು, ಭಾರತ ನಾಲ್ಕನೇ ಟೆಸ್ಟ್...