ಬೆಂಗಳೂರು, ಜ 13 – ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಜನವರಿ ೨೮ ಫೆಬ್ರವರಿ ೫ ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ, ಸಂಪ್ರದಾಯದಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಜನವರಿ 28 ರಂದು ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದರು.
ಮಾರ್ಚನಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಆದರೆ ಆಯವ್ಯಯ ಅಧಿವೇಶನಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಜೆ.ಸಿ. ಮಾಧುಸ್ವಾಮಿ ಹೇಳಿದರು.