ಜಕಾರ್ತ, ಜ 15- ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪದಿಂದ ಇದು ವರೆಗೆ 26 ಜನರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ.
ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಕಂಪನ ದಾಖಲಾಗಿದ್ದು ಕಂಪನದಿಂದಾಗಿ ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದ ಜನರ ಪತ್ತೆಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಗಾಯಗೊಂಡವರ ಸಂಖ್ಯೆ 600 ಎಂದು ಅಂದಾಜಿಸಲಾಗಿದೆ.
ಕಂಪನದಿಂದ ನಗರದ ಆಸ್ಪತ್ರೆಯೊಂದು ಕುಸಿದು ಬಿದ್ದಿದ್ದು ಅದರಡಿ ಅನೇಕರು ಸಿಲುಕಿ ಕೊಂಡಿದ್ದಾರೆ. ದುರಂತದಿಂದ ಒಂದು ಹೋಟೆಲ್ ಗಳು ಕೂಡ ನಾಶವಾಗಿವೆ ಎಂದು ವರದಿಗಳು ತಿಳಿಸಿವೆ.