ಬೆಳಗಾವಿ: ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಬಳಿ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದವರು. ಕೆಲಸಕ್ಕೆ ಕಿಣಿಯೆ ಗ್ರಾಮ ಪಂಚಾಯತಗೆ ಹೋಗಿದ್ದ ವೇಳೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ಮೋಹನ ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ರಕ್ತದಲ್ಲಿ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಯ ಶವಗಾರಕಕ್ಕೆ ಮೃತದೇಹ ರವಾನೆ ಮಾಡಲಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಗ್ರಾಮೀಣ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.