ಬದುಕಿದ್ದ ರೈತನಿಗೆ ಮರಣ ದೃಢೀಕರಣ: ನಾಲ್ವರು ಅಧಿಕಾರಿಗಳ ಮೇಲೆ ಕೇಸ್‌

A B Dharwadkar
ಬದುಕಿದ್ದ ರೈತನಿಗೆ ಮರಣ ದೃಢೀಕರಣ: ನಾಲ್ವರು ಅಧಿಕಾರಿಗಳ ಮೇಲೆ ಕೇಸ್‌

 

ಬೆಳಗಾವಿ : ರೈತ ಬದುಕಿದ್ದಾಗಲೇ ಸತ್ತಿರುವುದಾಗಿ ದಾಖಲೆ ಸೃಷ್ಟಿಸಿ, ದೃಢೀಕರಿಸಿದ ಆರೋಪದಡಿ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಜಿಲ್ಲೆಯ ಸವದತ್ತಿ ತಾಲ್ಲೂಕಿನ ಸುತಗಟ್ಟಿ ಗ್ರಾಮದ ರೈತ 53 ವರುಷದ ಈರಪ್ಪ ನಾಗಪ್ಪ ಅಬ್ಬಾಯಿ ಎಂಬುವರು ಇನ್ನೂ ಬದುಕಿದ್ದಾರೆ, ಆದರೆ 2021ರಲ್ಲೇ ಅವರು ತೀರಿಹೋಗಿದ್ದಾರೆ ಎಂದು ಸರಕಾರದ ಅಧಿಕೃತ ದಾಖಲೆಗಳಲ್ಲಿ ನಮೂದಿಸಿ ಅವರಿಗೇ ಮರಣ ಪ್ರಮಾಣಪತ್ರ ನೀಡಿದ್ದರು. ಇದು ಆ ರೈತನು ನ್ಯಾಯವಾಗಿ ದೊರೆಯ ಬೇಕಾದ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದರು.

ಈ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಯನ್ವಯ ದೂರು ದಾಖಲಿಸಿಕೊಂಡಿರುವುದಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಪ ಎಸಗಿದ ಸುತಗಟ್ಟಿ ಗ್ರಾಮ ಲೆಕ್ಕಾಧಿಕಾರಿ ನೀಲಾ ಮುರಗೋಡ, ಮುರಗೋಡ ವೃತ್ತದ ಕಂದಾಯ ನಿರೀಕ್ಷಕ ಆರ್‌.ಎಸ್‌.ಪಾಟೀಲ, ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್‌ ಅವರ ಮೇಲೆ ದೂರು ದಾಖಲಿಸಿಕೊಂಡು, ವಿಚಾರಣೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.