This is the title of the web page

ನಕಲಿ ಜಾತಿ ಪ್ರಮಾಣಪತ್ರ ನೀಡಿದ್ದ ತಹಶೀಲದಾರ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ, 2- ಜಾತಿ ಸರ್ಟಿಫಿಕೇಟ್ ಪಡೆಯಲು ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಶಿವಮೊಗ್ಗ ತಹಶೀಲ್ದಾರ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಳ್ಳು ಮಾಹಿತಿ ನೀಡಿ ಶೇಷಪ್ಪ ಎಂಬುವರು ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದರು. ಅರ್ಜಿಯಲ್ಲಿ ಅವರು ನೀಡಿದ್ದ ಮಾಹಿತಿ ಪರಿಶೀಲಿಸದೇ ತಹಶೀಲ್ದಾರ ಅವರು ಜಾತಿ ಪ್ರಮಾಣ ಪತ್ರವನ್ನು ನೀಡಿದ್ದಾರೆ ಎಂಬುದಾಗಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ದೂರು ನೀಡಿತ್ತು.

ಈ ದೂರಿನ ಹಿನ್ನಲೆಯಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಇದೀಗ ಶಿವಮೊಗ್ಗ ತಹಶೀಲ್ದಾರ, ರೆವೆನ್ಯೂ ಇನ್ಸಪೆಕ್ಟರ್ ಹಾಗೂ ಗ್ರಾಮಲೆಕ್ಕಿಗರ ವಿರುದ್ಧ ಪ್ರಕರಣ ದಾಖಲಾಗಿದೆ.

You might also like
Leave a comment