ಪ್ರವಾಹದಲ್ಲಿ ಕೊಚ್ಚಿ ಹೋದ ಕುಟುಂಬ; ಮೂವರ ಮೃತ್ಯು, ಇಬ್ಬರು ಮಕ್ಕಳು ನಾಪತ್ತೆ

A B Dharwadkar
ಪ್ರವಾಹದಲ್ಲಿ ಕೊಚ್ಚಿ ಹೋದ ಕುಟುಂಬ; ಮೂವರ ಮೃತ್ಯು, ಇಬ್ಬರು ಮಕ್ಕಳು ನಾಪತ್ತೆ

ಮುಂಬೈ, ಜುಲೈ ೧: ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದು ದಿಢೀರನೇ ಬಂದ ಜಲಪಾತದ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದಾರೆ. ಇದರಲ್ಲಿ ಮೂವರು ಸಾವನ್ನಪ್ಪಿದ್ದು ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ಎಂಬ ಮಕ್ಕಳು ನಾಪತ್ತೆಯಾಗಿದ್ದಾರೆ.

ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಏಳು ಜನರ ಕುಟುಂಬವೊಂದು ರಜಾ ದಿನವಾಗಿದ್ದರಿಂದ ಮುಂಬೈಯಿಂದ 80 ಕಿ.ಮೀ ದೂರದಲ್ಲಿರುವ ಭೂಶಿ ಆಣೆಕಟ್ಟಿನ ಹಿನ್ನೀರಿನ ಲೋನಾವಾಲಾ ಜಲಪಾತ ಬಳಿ ಬಂದಿತ್ತು. ಈ ವೇಳೆ ನೀರಿನ ಪ್ರಮಾಣ ಕಡಿಮೆ ಇತ್ತು. ಕುಟುಂಬ ಸದಸ್ಯರು ನೀರಿನ ನಡುವೆ ಆಟವಾಡಲು ತೆರಳಿದ್ದಾರೆ. ದುರದೃಷ್ಟವಶಾತ್ ಈ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸರಿಯುತ್ತಿರುವ ಮಳೆಯಿಂದ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ಹಿನ್ನೀರಿನ ಮಟ್ಟ ಒಮ್ಮೆಲೇ ಏರಿಕೆಯಾಗಿದೆ. ಹಾಗಾಗಿ ಏಕಾಏಕಿ ಜಲಪಾತದ ಬಳಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಏಳು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಇಬ್ಬರು ಈಜಿ ದಡ ಸೇರಿ ಬಚಾವಾಗಿದ್ದು ಐವರು ನೀರುಪಾಲಾಗಿದ್ದರು. ಇದರಲ್ಲಿ ಮೂವರ ಮೃತದೇಹಗಳು ಭಾನುವಾರ ಪತ್ತೆಯಾಗಿದ್ದು ಇಬ್ಬರು ನಾಪತ್ತೆಯಾಗಿದ್ದರು. ಅವರ ಪತ್ತೆ ಕಾರ್ಯಾಚರಣೆ ಸೋಮವಾರ ನಡೆಸುವುದಾಗಿ ರಕ್ಷಣಾ ತಂಡ ತಿಳಿಸಿದೆ.

ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದರೂ ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.