ವಿಮಾನ ದುರಂತದಲ್ಲಿ ಹುತಾತ್ಮರಾದ ಪೈಲಟ್ ಸಾರಥಿ ಅವರಿಗೆ ಅಂತಿಮ‌ ನಮನ

A B Dharwadkar
ವಿಮಾನ ದುರಂತದಲ್ಲಿ ಹುತಾತ್ಮರಾದ ಪೈಲಟ್ ಸಾರಥಿ ಅವರಿಗೆ ಅಂತಿಮ‌ ನಮನ

ಬೆಳಗಾವಿ, ಜ.29 : ಗ್ವಾಲಿಯರ್ ಸಮೀಪ ನಡೆದ ವಾಯುಪಡೆಯ ಯುದ್ಧ ವಿಮಾನಗಳ ಪತನ ವೇಳೆ ಹುತಾತ್ಮರಾದ ಪೈಲಟ್ ವಿಂಗ್ ಕಮಾಂಡರ್‌ ಬೆಳಗಾವಿಯ ಗಣೇಶಪುರದ ಹನುಮಂತರಾವ ರೇವಣಸಿದ್ದಪ್ಪ ಸಾರಥಿ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಯೋಧನ ಪಾರ್ಥೀವ ಶರೀರವನ್ನು ಸೇನೆಯ‌ ವಿಶೇಷ ವಿಮಾನದ ಮೂಲಕ ರವಿವಾರ ಮಧ್ಯಾಹ್ನ 12.30 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್ ಮತ್ತಿತರ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಪಾಟೀಲ ಅವರಿಂದ ಶ್ರದ್ಧಾಂಜಲಿ:

ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ ಸಾರಥಿ ಅವರು ನಿಧನರಾದ ವಿಷಯ ತಿಳಿದು ತುಂಬ ದುಃಖವಾಯಿತು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸಂತಾಪ ವ್ಯಕ್ತಪಡಿಸಿದರು.

ಹೆಮ್ಮೆಯ ಯೋಧ ಹನುಮಂತರಾವನನ್ನು ಕಳೆದುಕೊಂಡಿದ್ದು ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾಧಿಕಾರಿ ಪಾಟೀಲ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.