ಬೆಳಗಾವಿ : ಪ್ರೇಮಿಯೊಬ್ಬ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಕಾರಣಕ್ಕೆ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಇಲ್ಲಿನ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಅಶ್ವಿನಿ ಮೃತ ಬಾಲಕಿ. ರತನ್ ಪಾಟೀಲ್ ಎಂಬಾತ ಅಶ್ವಿನಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಬಾಲಕಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

