ನಿಪ್ಪಾಣಿ, 24- ನಗರದ ಹೊರವಲಯದಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದೆ. ಗಂಡು ಶಿಶುವನ್ನು ಚೀಲದಲ್ಲಿಟ್ಟು ಪಾಪಿಗಳು ಬಿಟ್ಟುಹೋಗಿದ್ದು ಅದನ್ನು ಕಂಡ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಶಿಶುವನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿದ್ದು ಆರೋಗ್ಯವಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಶಿಶುವಿನ ಹೆತ್ತವರಿಗಾಗಿ ಶೋಧ ನಡೆಸಲಾಗುತ್ತಿದ್ದು ಈ ಕುರಿತು ತನಿಖೆ ಕೈಗೊಳ್ಳಲಾಗಿದೆ.