ಅಂಕೋಲಾ : ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಬಸ್ ನೊಳಗೆ ಸಿಲುಕಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿ, ಕೆಲವರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಬಳಿ ಈ ಅಪಘಾತ ಸಂಭವಿಸಿದೆ. ಬಸ್ ಒಳಗೆ ಸಿಲುಕಿದ್ದ ಓರ್ವ ಪ್ರಯಾಣಿಕ ಬಸ್ ನಲ್ಲೇ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. 25 ಪ್ರಯಾಣಿಕರನ್ನು ರಕ್ಷಿಸಲಾಗಿದೆ .
ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ ಸಿಲುಕಿ ಸಾವನ್ನಪ್ಪಿರುವ ಪ್ರಯಾಣಿಕನ ಮೃತದೇಹವನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ.

