ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಶುಬಾಳಿ ಸಿಂಗ್, ಊರ್ವಿ, ಪ್ರಿಯಾಂಕ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಬೆಂಗಳೂರು ಕಡೆಯಿಂದ ಗೋವಾ ಕಡೆಗೆ ತೆರಳುತ್ತಿತ್ತು. 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬ್ರಿಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ.
ಗಾಯಗೊಂಡ ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.