ಬೆಂಗಳೂರು : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ರಹಸ್ಯವಾಗಿ ಕ್ಯಾಮೆರಾ ಇಟ್ಟು ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶುಭಂ ಎಂ ಆಜಾದ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದಾನೆ.
1200 ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನು ಈತ ತೆಗೆದಿದ್ದ. ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಅಥವಾ ಸರಿಪಡಿಸಲು ಆತ ಹೋದಾಗ ಯುವತಿಯರು ಚೀರಾಡಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದ. ಸಿಸಿಟಿವಿ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ.
ಬಂಧಿತನ ಮೊಬೈಲ್ ನಲ್ಲಿ 1200 ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳು ಪತ್ತೆಯಾಗಿದೆ. ಆರೋಪಿ ಬಳಿ ಮತ್ತೊಂದು ಮೊಬೈಲ್ ಇದ್ದು ಅದರಲ್ಲಿ ಮತ್ತಷ್ಟು ವಿಡಿಯೋಗಳು ಪತ್ರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.