Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಕಳ್ಳತನಕ್ಕೆಂದು ಬಂದು ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಳ್ಳ


ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಐಷಾರಾಮಿ ಮನೆಗೆ ಕಳ್ಳತನ ಮಾಡಲು ಬಂದ ಕಳ್ಳನೊಬ್ಬ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

ಅಸ್ಸಾಂ ಮೂಲದ ದಿಲೀಪ ಕುಮಾರ (46) ಮೃತ ವ್ಯಕ್ತಿ. ಇಂದಿರಾ ನಗರದ ಮನೆಯ ಮಾಲೀಕರು ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದರು. ವಾಪಸ್ ಬಂದ ವೇಳೆ ಮನೆಯಲ್ಲಿ ಯಾರೋ ಇದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ದೇವರ ಮನೆಯ ಕಿಟಕಿ ತೆಗೆದು ನೋಡಿದಾಗ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ತಕ್ಷಣ ಮನೆ ಮಾಲೀಕರು ಇಂದಿರಾ ನಗರ ಠಾಣೆ ಪೊಲೀಸರಿಗೆ ತಿಳಿಸಿದ್ದಾರೆ. ಮೃತ ದಿಲೀಪ ಕುಮಾರ ಈ ಹಿಂದೆಯೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಇದೀಗ ಘಟನೆ ಸಂಬಂಧ ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.


Leave a Reply