ಬೆಳಗಾವಿ: ಸಾಲಭಾದೆ ತಾಳಲಾರದೇ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಲು ಹೋಗಿ, ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ.
ಸಂಜಯ ಪಾಟೀಲ(35) ಮೃತ ದುರ್ದೈವಿ. ಸಾಲಭಾದೆ ತಾಳಲಾರದೇ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ.
ಈ ವೇಳೆ ಟವರ್ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.