ಬಾಗಲಕೋಟ: ಗೋವಿನಜೋಳ ಮಷಿನ್ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.
ರೇಣುಕಾ ಮಾದರ (45) ಮೃತ ದುರ್ದೈವಿ. ಕೂಲಿ ಕೆಲಸ ಬಂದಿದ್ದ ರೇಣುಕಾ, ಕೆಲಸ ಮಾಡುವಾಗ ಗೋವಿನಜೋಳ ಮಷಿನ್ ಚಕ್ರಕ್ಕೆ ಸೀರೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.