This is the title of the web page

ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್ : 10 ಜಿಲ್ಲೆಯಲ್ಲಿ ರೇಡ್

ಬೆಂಗಳೂರು, ೧೭- ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಲವು ಅಧಿಕಾರಿಗಳ ಮನೆ – ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

21 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಎಸಿಬಿ ಅಧಿಕಾರಿಗಳು ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಹಾಸನದ ಎಇಇ ರಾಮಕೃಷ್ಣ ಮನೆ, ಕಚೇರಿ ಸೇರಿ 3 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರ ಗೋಗಿ ಮನೆ, ಕಚೇರಿಗಳ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಾವೇರಿಯಲ್ಲಿ ಎಇ ಚಂದ್ರಪ್ಪ ಓಲೇಕಾರ ಅವರ ಮನೆ ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಲಾಗಿದೆ. ಇತ್ತ ಬೆಳಗಾವಿಯಲ್ಲಿ ಪಿಡಬ್ಲ್ಯುಡಿ ಇಲಾಖೆ ಅಧೀಕ್ಷಕ ಬಿ.ವೈ. ಪವಾರ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ನಿಪ್ಪಾಣಿ ಮತ್ತು ಬೋರಗಾಂವ ಸೇರಿದಂತೆ ವಿವಿಧೆಡೆಯಲ್ಲಿರುವ ಮನೆ-ಕಚೇರಿ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಗಿದೆ. ಕೊಪ್ಪಳದಲ್ಲಿ ಪೊಲೀಸ್ ಅಧಿಕಾರಿ ಉದಯರವಿ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ.

ಧಾರವಾಡದಲ್ಲಿ ಆರ್ ಟಿ ಓ ಅಧಿಕಾರಿ ಮನೆ ಮೇಲೆ ದಾಳಿ ಮಾಡಲಾಗಿದೆ. ಬಾಗಲಕೋಟ ಆರ್ ಟಿ ಓ ಯಲ್ಲಪ್ಪ ಪಡಸಾಲಿ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ.

ರಾಜ್ಯದ್ಯಂತ 81 ಕಡೆಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

You might also like
Leave a comment