This is the title of the web page

ಭೀಕರ ಅಪಘಾತ : ಇಬ್ಬರ ಸಾವು, 10 ಮಂದಿಗೆ ಗಾಯ

ತುಮಕೂರು : ಭೀಕರ ಬಸ್ ಅಪಘಾತದಲ್ಲಿ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ.

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸರ್ಕಾರಿ ಬಸ್ ಹಾಗೂ ಕಾರಿನ ನಡವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಗಿರೀಶ (37), ಮಾನ್ಯ (17) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You might also like
Leave a comment