This is the title of the web page

ರಥೋತ್ಸವದ ವೇಳೆ ಘೋರ ದುರಂತ; ವಿದ್ಯುತ್ ತಂತಿ ತಗುಲಿ ೧೧ ಜನರ ದುರ್ಮರಣ

ತಂಜಾವೂರು, ೨೭- ರಥೋತ್ಸವದ ವೇಳೆ ಭಾರಿ ದುರಂತವೊಂದು ಸಂಭವಿಸಿದ್ದು ತೇರಿಗೆ ಹೈವೋಲ್ಟೇಜ​ ವಿದ್ಯುತ್​ ತಂತಿ ತಗುಲಿ ಮೂವರು ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. ೧೫ ಮಂದಿ ಈ ದುರಂತದಲ್ಲಿ ಗಾಯಗೊಂಡಿದ್ದು ಘಟನೆ ಬುಧವಾರ ಬುಧವಾರ ಬೆಳಗಿನ ಜಾವ ನಡೆದಿದೆ.

ತಮಿಳುನಾಡಿನ ತಂಜಾವೂರು ಸಮೀಪದ ಕಾಳಿಮೇಡು ಗ್ರಾಮದಲ್ಲಿ ನಡೆದ ತಂಜಾವೂರಿನ ಅಪ್ಪರ ಸ್ವಾಮಿ ದೇವಾಲಯದಲ್ಲಿ ನಿನ್ನೆ ರಥೋತ್ಸವ ನಡೆಯುತ್ತಿತ್ತು. ಅಲಂಕೃತಗೊಂಡಿದ್ದ ರಥವನ್ನು ಗ್ರಾಮದ ಬೀದಿಗಳಲ್ಲಿ ಎಳೆಯಲಾಗುತ್ತಿತ್ತು. ಈ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ೧೫ ಮಂದಿ ಗಾಯಗೊಂಡಿದ್ದು, ತಂಜಾವೂರಿನ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರನ್ನು ಎಂ ಮೋಹನ (22), ಕೆ ಪ್ರತಾಪ್ (36), ಎ ಅನ್ಬಳಗನ್ (60), ಅವರ ಪುತ್ರ ರಾಘವನ್ (24), ಆರ್ ಸಂತೋಷ (15), ಟಿ ಸೆಲ್ವಮ್ (56), ಎಂ ರಾಜ‌ಕುಮಾರ (14), ಆರ್ ಸ್ವಾಮಿನಾಥನ್ (56), ಎ ಗೋವಿಂದರಾಜ, ಎಸ್ ಭರಣಿ (13), ನಾಗರಾಜ (60) ಎಂದು ಗುರ್ತಿಸಲಾಗಿದೆ. ಎಲ್ಲರೂ ಕಾಳಿಮೇಡು ಗ್ರಾಮದವರಾಗಿದ್ದಾರೆ.

ದೇವರ ರಥೋತ್ಸವ ಮುಗಿಸಿ ರಥ ದೇವಸ್ಥಾನಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ರಸ್ತೆಯ ತಿರುವಿನಲ್ಲಿ ಮುಂದೆ ತೆರಳದೇ ನಿಂತಿದ್ದ ರಥವನ್ನು ಸ್ವಲ್ಪ ಹಿಂದಕ್ಕೆ ತಂದು ಪುನಃ ಮುಂದಕ್ಕೆ ಎಳೆದುಕೊಂಡು ಹೋಗುವಾಗ ರಥದ ಮೇಲ್ತುದಿ ಹೈ ಟೆನ್ಶನ್ ವಿದ್ಯುತ್ ತಂತಿಗಳಿಗೆ ತಗುಲಿ ಈ ದುರಂತ ಸಂಭವಿಸಿತು ಎಂದು ಹೇಳಲಾಗಿದೆ.

ಘಟನೆಗೆ ತೀವ್ರ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಘಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳಿಗೆ ರೂ. 50,000 ನೀಡುವುದಾಗಿ ಪ್ರಕಟಿಸಿದ್ದಾರೆ.

You might also like
Leave a comment