Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ದೀಪಾವಳಿ ಹಬ್ಬಕ್ಕೆ ಮನೆಗೆ ತೆರಳುತ್ತಿದ್ದಾಗ ಅಪಘಾತ; 15 ಜನ ಸಾವು 


ಭೋಪಾಲ : ದೀಪಾವಳಿ ಹಬ್ಬಕ್ಕೆ ಊರುಗಳಿಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದ್ದ ಟ್ರಕಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ 15 ಜನರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 30ರಲ್ಲಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 35 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವು ದಾರಿಹೋಕರು ಘಟನೆಯ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಕೂಡಲೇ ಬಸನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯುವ ಕೆಲಸಕ್ಕೆ ಮುಂದಾದರು. ಮೂರರಿಂದ ನಾಲ್ಕು ಮಂದಿ ಬಸ್ ಕ್ಯಾಬಿನ ಒಳಗೆ ಸಿಲುಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್, ಉತ್ತರ ಪ್ರದೇಶದ ಜಬಲ್ಪುರದಿಂದ ರೇವಾ ಮೂಲಕ ಪ್ರಯಾಗ್‌ ರಾಜ್‌ ಗೆ ಹೋಗುತ್ತಿತ್ತು. ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ಮನೆಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


A B Dharwadkar
the authorA B Dharwadkar

Leave a Reply