ಮಡಿಕೇರಿ, ೨೯- ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಬೂಬಕರ್ ಸಿದ್ದಿಕಿ ಬಂಧನಕ್ಕೊಳಗಾದವನಾಗಿದ್ದಾನೆ.
ದೇವಯ್ಯ ಎಂಬವರು ತಮ್ಮ ಹಸುವನ್ನು ಮೇಯಲು ಬಿಟ್ಟು ಸುಂಟಿಕೊಪ್ಪ ಸಂತೆಗೆ ಹೋಗಿ ವಾಪಸ್ ಬರುವ ವೇಳೆ ಅಬೂಬಕರ್ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದ ದೇವಯ್ಯ ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.