ಸೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದ ಜತ್ ತಾಲೂಕಿನ ಜನರು ತಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸರ್ಕಾರಕ್ಕೆ ಅಕ್ಕಲಕೋಟ ತಾಲೂಕಿನ ಜನರೂ ಸಹ ತಮ್ಮನ್ನು ಕರ್ನಾಟಕ್ಕೆ ಸೇರಿಸಿ ಎಂದು ಪಟ್ಟು ಹಿಡಿದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಜನರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ಮಹಾಜನ ಆಯೋಗ ವರದಿಯಂತೆ ನಾವೂ ಕರ್ನಾಟಕ್ಕೆ ಹೋಗುತ್ತೇವೆ. 5 ದಶಕಗಳಿಂದ ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕುಡಿಯುವ ನೀರು, ರಸ್ತೆ, ಕನ್ನಡ ಶಾಲೆಗಳಿಗೆ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಗಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಮಹಾಜನ ವರದಿಯಂತೆ ನಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.