ಬೆಂಗಳೂರು: ರಾಜ್ಯದಲ್ಲಿ ಹೊಸ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದಾಖಲು ಅಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯನ್ನು ಪ್ರೀತಿಸಿ ಬಳಿಕ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಬಲವಂತದ ಮತಾಂತರಕ್ಕೆ ಯತ್ನಿಸಿದ್ದ ಎಂದು ಆರೋಪಿಸಿ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸೈಯದ್ ಮೊಯಿನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೈಯದ ಮೊಯಿನ್ (24) ನನ್ನು ಮತಾಂತರ ನಿಷೇಧ ಕಾಯ್ದೆಯಡಿ ಬಂಧಿಸಲಾಗಿದೆ. ಆರಂಭದಲ್ಲಿ ಇದೊಂದು ನಾಪತ್ತೆ ಪ್ರಕರಣ ಎಂದು ಪರಿಗಣಿಸಲಾಗಿತ್ತು. ತನಿಖೆ ಬಳಿಕ ಇದು ಮತಾಂತರ ಪ್ರಕರಣ ಎಂದು ತಿಳಿದುಬಂದಿದೆ.