242 ಜನರಿದ್ದ ಅಹಮದಾಬಾದ-ಲಂಡನ್‌ ಏರ್‌ ಇಂಡಿಯಾ ವಿಮಾನ ಪತನ

A B Dharwadkar
242 ಜನರಿದ್ದ ಅಹಮದಾಬಾದ-ಲಂಡನ್‌ ಏರ್‌ ಇಂಡಿಯಾ ವಿಮಾನ ಪತನ

ಅಹ್ಮದಾಬಾದ: ಗುಜರಾತಿನ ಅಹಮದಾಬಾದದಿಂದ ಲಂಡನ್‌‌ ಗೆ ಹೊರಟಿದ್ದ ಬೋಯಿಂಗ ವಿಮಾನ ಟೇಕ್‌ ಆಫ್‌ ಸಮಯದಲ್ಲಿ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದೆ. ಅಹಮದಾಬಾದ​ ಏರ​ಪೋರ್ಟ ಬಳಿ ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ಬೆಂಕಿ ಹತ್ತಿ ಹೊತ್ತಿ ಉರಿದು ಎಲ್ಲೆಡೆ ಹೊಗೆ ಕಾಣಿಸಿಕೊಂಡಿದೆ.

ಏರ​ಪೋರ್ಟ ಬಳಿಯ ಮೇಧಿನಿ ನಗರ​ದಲ್ಲಿ ಬೋಯಿಂಗ್ 787-8 ಡ್ರೀಮ್‌ ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ ಗೆ ತೆರಳುತ್ತಿತ್ತು. ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು.

ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ.

ವಿಮಾನ ನಿಲ್ದಾಣ ಪ್ರದೇಶದಿಂದ ಕೆಲವು ಜನರನ್ನು ಆಸ್ಪತ್ರೆಗೆ ಕರೆದೊಯ್ಯುವುದನ್ನು ನೋಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿಯ ಪ್ರಕಾರ, ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ಸೇರಿದಂತೆ ತುರ್ತು ಸೇವೆಗಳನ್ನು ಅಪಘಾತದ ಸ್ಥಳಕ್ಕೆ ರವಾನಿಸಲಾಗಿದೆ. ಸಾವು ನೋವುಗಳು ಅಥವಾ ಅಪಘಾತದ ಕಾರಣ ಸೇರಿದಂತೆ ಹೆಚ್ಚಿನ ವಿವರಗಳು ತಕ್ಷಣ ಲಭ್ಯವಿಲ್ಲ.

ಏರ್ ಇಂಡಿಯಾ ವಿಮಾನ ಪತನವಾದ ಹಿನ್ನಲೆಯಲ್ಲಿ ಸಂಜೆ 5 ಗಂಟೆವರೆಗೂ ಅಹ್ಮದಾಬಾದ ವಿಮಾನ ನಿಲ್ದಾಣ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಎಲ್ಲ ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.