ಧಾರವಾಡ: ಮದ್ಯಾಹ್ನದ ಊಟ ಮುಗಿಸಿ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಲ್ಪಥ ಅಲಿಯಾಸ್ ನಾಮ, ಮಲಿಕ್, ಮುಬಾರಕ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿರುವ 36 ವರ್ಷದ ಮಹಿಳೆ ನಿನ್ನೆ ಮದ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳೆ ಕಿರಿಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.
ಮಹಿಳೆ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಹಿಳೆಗೆ ಕಿಮ್ಸ್ನಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.