ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಕಚೇರಿಯಲ್ಲಿದ್ದ ಮಹತ್ವದ ಫೈಲ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿಗೆ ಸಂಬಂಧಿಸಿದ ಮಹತ್ವದ ಫೈಲ್ ಕಾಣೆಯಾಗಿದೆ ಎಂದು ಹೇಳಲಾಗುತ್ತಿದೆ. ನಗರಾಭಿವೃದ್ಧಿ ಇಲಾಖೆ ಬೆಂಗಳೂರಿನಲ್ಲಿ ಜಾಹಿರಾತು ನಿಯಮ ವಿಚಾರಕ್ಕೆ ಸಂಬಂಧಿಸಿದಂತೆ ಕಳುಹಿಸಿದ್ದ ಕಡತ ಇದಾಗಿದ್ದು, ಈ ಕಡತ ನಾಪತ್ತೆಯಾಗಿದೆ ಎನ್ನಲಾಗಿದೆ.
2021 ಡಿ.7ರಂದೇ ನಗರಾಭಿವೃದ್ಧಿ ಇಲಾಖೆ ಈ ಫೈಲ್ ನ್ನು ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿತ್ತು. ಆದರೆ ಫೈಲ್ ಇದುವರೆಗೂ ವಾಪಸ್ ಇಲಾಖೆಗೆ ಬಂದಿಲ್ಲ ಎಂದು ನಗರಾಭಿವೃದ್ಧಿ ಇಲಾಖೆ ಮುಖ್ಯಕಾರ್ಯದರ್ಶಿಗಳು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿದ್ದ ಫೈಲ್ ಕಾಣದಿರುವುದು ಇದೀಗ ಭದ್ರತೆಯಲ್ಲಿ ಲೋಪವೇ? ಎಂಬ ಅನುಮಾನ ವ್ಯಕ್ತವಾಗಿದೆ.