Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

ವಿಧಾನಭೆಯ ಉಪ ಸಭಾಪತಿ ಆನಂದ ಮಾಮನಿ ವಿಧಿವಶ 


ಬೆಂಗಳೂರು : ವಿಧಾನಭೆಯ ಉಪ ಸಭಾಪತಿ, ಸವದತ್ತಿ ಮತ ಕ್ಷೇತ್ರದ ಶಾಸಕ ಆನಂದ ಮಾಮನಿ(56) ಅವರು ಇಂದು ರಾತ್ರಿ12 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಈ ಮೊದಲು ಚೆನ್ನೈ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂದ ಮಾಮನಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಂಬುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನ ಸವದತ್ತಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ.


A B Dharwadkar
the authorA B Dharwadkar

Leave a Reply