Please assign a menu to the primary menu location under menu

Crime News

ಪಿಎಸ್‌ಐ ನೇಮಕಾತಿ ಅಕ್ರಮ : ಮತ್ತೊಬ್ಬ ಅಭ್ಯರ್ಥಿಯ ಬಂಧನ


ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 7 ನೇ ಆರೋಪಿಯಾಗಿದ್ದ ಎ.ಪಿ. ಮನೋಜ್ ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನ ಕಸ್ಟಡಿಗೆ ಪಡೆಯಲಾಗಿದೆ.

ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮನೋಜ್ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.


Samadarshi News

Leave a Reply