This is the title of the web page

ಹಿಜಾಬ್ ಕುರಿತ ಹೈಕೋರ್ಟ ತೀರ್ಪು ಪ್ರಶ್ನಿಸಿ ಸುಪ್ರೀಮ ಕೋರ್ಟನಲ್ಲಿ ಮೇಲ್ಮನವಿ

ಹೊಸದಿಲ್ಲಿ, 15- ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ. ಖುರಾನ್ ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯಗೊಳಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ ಮಂಗಳವಾರ ನೀಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಮ ಕೋರ್ಟನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.

ವಿದ್ಯಾರ್ಥಿನಿ ನಿಭಾ ನಾಜ್ ಪರವಾಗಿ ವಕೀಲ ಅನಾಸ್ ತನ್ವೀರ ಅವರು ಸುಪ್ರೀಮ ಕೋರ್ಟನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ ಇಂದು ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ ಮತ್ತು ಜೆ.ಎಂ ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು.

You might also like
Leave a comment