Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಹೊಸ ಪಿಯು ಕಾಲೇಜು ಆರಂಭಕ್ಕೆ ಅರ್ಜಿ ಆಹ್ವಾನ 


ಬೆಂಗಳೂರು : ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹೊಸದಾಗಿ ಕಾಲೇಜು ಆರಂಭಕ್ಕೆ ಇಚ್ಚಿಸುವ ಶಿಕ್ಷಣ ಸಂಸ್ಥೆಗಳು ಹಾಗೂ ಟ್ರಸ್ಟ್ ಗಳು ದಿನಾಂಕ 07 – 11- 2022 ರಿಂದ ದಿನಾಂಕ 06-12- 2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ www.pue.karnataka.gov.in ನಲ್ಲಿ ನಿಗದಿತ ಲಿಂಕ್ https://dpue-exam.karnataka.gov.in/newcollege2023/ ರಿಂದ ಪಡೆಯಬಹುದಾಗಿದೆ.

2021-22 ಮತ್ತು 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಆನ್ಲೈನ್ ಮೂಲಕ ಈಗಾಗಲೇ ಹೊಸ ಪದವಿ ಪೂರ್ವ ಕಾಲೇಜು ಮಂಜೂರು ಕೋರಿ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ / ಟ್ರಸ್ಟ್ ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.


A B Dharwadkar
the authorA B Dharwadkar

Leave a Reply