ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಪ್ರಭಾವದಿಂದಾಗಿ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ ವಿರುದ್ಧ ಮೃತ ಸಂತೋಷ ಸೋದರ ಸಂಬಂಧಿ ಪ್ರಶಾಂತ ಪಾಟೀಲ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.