ಹೊಸದಿಲ್ಲಿ : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳೂ ಭಾಗಿಯಾಗಿರುವುದು ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿತ್ತು.
ಆದರೆ ಇಬ್ಬರು ಐಎಎಸ್ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಭಾಗಿಯಾಗಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿದ್ದು, ವೋಟರ್ ಐಡಿ ಅಕ್ರಮದ ಬಗ್ಗೆ ತನಿಖೆಗಾಗಿ ಏಳು ಜನ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ.
ಮತದಾರ ಪಟ್ಟಿಯಿಂದ ತೆಗೆದು ಹಾಕಿರುವುದು, ಸೇರ್ಪಡೆ, ತಿದ್ದುಪಡಿ ಬಗ್ಗೆ ಪೂರ್ಣಪರಿಶೀಲನೆ ಎಂದು ಏಳು ಜನ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಿದೆ. ಅದರಲ್ಲೂ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ವಲಯದಲ್ಲಿ ವಿಶೇಷವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದೆ.
ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಆದವರ ಬಗ್ಗೆ ಕೂಲಂಕಷವಾಗಿ ಪರಿಶೀಲನೆಗೆ ಆದೇಶಿಸಿದ್ದು, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಕೂಡಾ ಅಮಾನತು ಮಾಡಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ.