ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಜಯೋತ್ಸವದ ಮೆರವಣಿಗೆಯಲ್ಲಿ ಖಡ್ಗ ಝಳಪಿಸಿದ ಮಹೇಶ ಹಳ್ಳದಮನಿ ಎಂಬವನನ್ನು ಬಂಧಿಸಲಾಗಿದೆ.
ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಎದುರು ನಡೆಯುತ್ತಿದ್ದ ವಿಜಯೋತ್ಸವದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಮಹೇಶ ತಲವಾರ ಎಂಬವ ಸಾರ್ವಜನಿಕವಾಗಿ ಖಡ್ಗ ಝಳಪಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದ ಕೂಡಲೇ ಎಚ್ಚತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆನ್ಲೈನ್ ಪ್ರಕಟವಾದ ಸುದ್ದಿಯನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ಯಾಗ್ ಮಾಡಿರುವ ಎಡಿಜಿಪಿ ಅಲೋಕ ಕುಮಾರ ಅವರು, ‘ಆರೋಪಿ ವಿರುದ್ಧ ರವಿವಾರ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.