ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಪ್ರಿಯಾ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ತಾತ್ಕಾಲಿಕ ಪಟ್ಟಿಯಲ್ಲಿ ಸುಪ್ರಿಯಾ ಪ್ರಥಮ ಸ್ಥಾನ ಪಡೆದಿದ್ದರು ಎನ್ನಲಾಗಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್ ಎನ್ ಗ್ರಾಮ ನಿವಾಸಿಯಾದ ಸುಪ್ರಿಯಾ ಬ್ಲೂಟೂತ್ ಬಳಸಿ ಅಕ್ರಮವಾಗಿ ಪಿಎಸ್ ಐ ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸುಪ್ರಿಯಾ ಹೆಸರಿತ್ತು, ಈ ಹಿನ್ನೆಲೆ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಈಗಾಗಲೇ ಸಿಐಡಿ ಪೊಲೀಸರು ಹಲವರನ್ನು ಇದುವರೆಗೆ ಬಂಧಿಸಿ ಜೈಲಿಗಟ್ಟಿದ್ದಾರೆ.