ಹುಬ್ಬಳ್ಳಿ: ವಿದ್ಯಾರ್ಥಿನಿಯನ್ನು ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿರುವ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಕ್ಷಯ ಪಾರ್ಕನ ಖಾಸಗಿ ಕಾಲೇಜ್ನಲ್ಲಿ ವಿದ್ಯಾರ್ಥಿಯೊಬ್ಬ ಹುಡುಗಿಯನ್ನು ಮಾತನಾಡಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ಕೊನೆಗೆ ವಿದ್ಯಾರ್ಥಿಯನ್ನು ಅಪಹರಿಸಿದ ನಾಲ್ವರು ಯುವಕರು, ಕುಸುಗಲ್ಲ ರಸ್ತೆಯ ಹಿಂದೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್, ಶಬರಿನಗರದ ಸೋಹೆಲ್ ಎಂಬವರು ಬಂಧಿತರು. ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ. ಪರಾರಿಯಾದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗೋಕುಲ್ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.