ಬೆಳಗಾವಿ : ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಾಮ ನಿರ್ದೇಶಿತ ನಿರ್ದೇಶಕರಾಗಿ ವಿಧಾನಸಭೆಯ ಮುಖ್ಯ ಸಚೇತಕ, ಕಾಂಗ್ರೆಸ್‌ನ ರಾಮದುರ್ಗ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಅಶೋಕ ಎಂ. ಪಟ್ಟಣ ಆಯ್ಕೆಯಾಗಿದ್ದಾರೆ.
ರಾಜ್ಯಪಾಲರ ಆದೇಶದ ಅನುಸಾರ ಅಶೋಕ ಪಟ್ಟಣ ಅವರನ್ನು ನಾಮ ನಿರ್ದೇಶಿತ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಅವರು ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದುಕೊಂಡಿದ್ದರು. ಇದೀಗ ಸರಕಾರ ಅವರನ್ನು ನಾಮನಿರ್ದೇಶಿತ ನಿರ್ದೇಶಕರನ್ನಾಗಿ ನೇಮಕ ಮಾಡುವ ಮೂಲಕ ಅವರ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಕನಸು ಈಡೇರಿದಂತಾಗಿದೆ.

