ಟಿ20 ತಂಡದ ನಾಯಕ ಸೂರ್ಯಕುಮಾರ ಯಾದವ ಅವರು ತಂಡವನ್ನು ಮುನ್ನಡೆಸಲಿದ್ದಾರೆ.
ಮುಂಬೈಯಲ್ಲಿ ಮಂಗಳವಾರ ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಅಜಿತ ಅಗರಕರ ಅವರು ಭಾರತ ತಂಡವನ್ನು ಪ್ರಕಟಿಸಿದರು. ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದ್ದು ಬೌಲರ್ ಜಸಪ್ರೀತ ಬೂಮ್ರಾ ಕೂಡಾ ಸ್ಥಾನ ಪಡೆದಿದ್ದಾರೆ.
ಈಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ಅವರು ನಿರೀಕ್ಷೆಗೂ ಮೀರಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಅಗರಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸ್ವದೇಶಿ ಟೆಸ್ಟ್ ಸರಣಿಗೆ ಬೂಮ್ರಾ ಲಭ್ಯತೆಯ ಬಗ್ಗೆ ಅನುಮಾನಗಳಿದ್ದವು. ಆದರೆ, ಆಯ್ಕೆದಾರರು ಬೂಮ್ರಾಗೆ ಮಣೆ ಹಾಕಿದ್ದು ಎಡಗೈ ಸ್ಪಿನ್ನರ್ ಕುಲದೀಪ ಯಾದವ ಅವರನ್ನು ಸಹ ಆಯ್ಕೆ ಮಾಡಲಾಗಿದೆ.

ಭಾರತ ತಂಡ : ಸೂರ್ಯಕುಮಾರ ಯಾದವ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ ಶರ್ಮಾ, ಹಾರ್ದಿಕ ಪಾಂಡ್ಯ, ಅಕ್ಷರ ಪಟೇಲ, ಜಸಪ್ರೀತ ಬೂಮ್ರಾ, ಜಿತೇಶ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅರ್ಷದೀಪ ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ ರಾಣಾ, ತಿಲಕ ವರ್ಮಾ, ರಿಂಕು ಸಿಂಗ್, ವರುಣ ಚಕ್ರವರ್ತಿ.

