ಹೊಸದಿಲ್ಲಿ, ೧೦- ಮುಂಬರುವ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಸಿದ್ಧತಾ ಪ್ರಕ್ರಿಯೆ ಆರಂಭಿಸಿದೆ. ಚುನಾವಣೆಯಲ್ಲಿ ನೇರವಾಗಿ ಸಂಬಂಧಪಡುವ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಕರ್ತವ್ಯದಲ್ಲಿ ಭಾಗಿಯಾಗುವ ಅಧಿಕಾರಿಗಳನ್ನು ತವರು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದು ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಸಂಬಂಧಪಟ್ಟಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಕೈಗೊಂಡ ಕ್ರಮಗಳ ಬಗ್ಗೆ 2023ರ ಜನವರಿ 31ರೊಳಗೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಏಪ್ರಿಲ್ ಅಥವಾ ಮೇ ಮೊದಲವಾರ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದಕ್ಕಾಗಿ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.