This is the title of the web page

ಮಹಾರಾಷ್ಟ್ರದಲ್ಲಿ ಕನ್ನಡಿಗರ ಆಸ್ತಿ ಪಾಸ್ತಿ ಮೇಲೆ ದಾಳಿ

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಸಾಂಗ್ಲಿ, 18- ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಕನ್ನಡಿಗರ ಅಂಗಡಿಗಳನ್ನು ಸಹ ಧ್ವಂಸಗೊಳಿಸಿದ್ದಾರೆ.

ಕೊಲ್ಲಾಪುರದಲ್ಲಿ ಕನ್ನಡ ಧ್ವಜ ಸುಟ್ಟ ನಂತರ ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಿದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ.

ಈಗ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರ ಹಾಗೂ ಕರ್ನಾಟಕ ಜನರ ಆಸ್ತಿ ಪಾಸ್ತಿಗಳ ಮೇಲೆ ದಾಳಿ ಮಾಡುತ್ತಿದ್ದಾರೆ.

ಆಸ್ಪತ್ರೆಗಳ ನಗರ ಮಿರಜ​ನಲ್ಲಿ ಶಿವಸೇನಾ ಕಾರ್ಯಕರ್ತರು ಬೀದಿಗಿಳಿದು ಕರ್ನಾಟಕ ರಾಜ್ಯದ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಅದರಂತೆ ಸಾಂಗ್ಲಿಯಲ್ಲಿ ಸಹ ಕನ್ನಡಿಗರ ಮೇಲೆ ಉದ್ಧಟತನ ಪ್ರದರ್ಶಿಸಿದ್ದು, ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಅಲ್ಲದೇ ಶಿವಸೇನಾ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ಇರುವ ಕನ್ನಡ ಬೋರ್ಡ​ಗಳಿಗೆ ಮಸಿ ಬಳಿದು ಕಲ್ಲು ತೂರಾಟ ನಡೆಸಿದ್ದಾರೆ.

ಬೆಳಗಾವಿ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಂತೆ ಮಹಾರಾಷ್ಟ್ರದಲ್ಲೂ ಉದ್ರಿಕ್ತ ಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ರಾಜ್ಯ ಸಾರಿಗೆ ಸಂಸ್ಥೆ ಬಸ್ಸುಗಳು ಗಡಿಭಾಗದವರೆಗೆ ಮಾತ್ರ ಚಲಿಸುತ್ತಿವೆ. ಅತ್ತ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ಸುಗಳು ಕರ್ನಾಟಕದ ಗಡಿಭಾಗದವರೆಗೂ ಮಾತ್ರ ಬಂದು ಹಿಂದಿರುಗುತ್ತಿವೆ.

ರಾಜ್ಯದ ಸಾರಿಗೆ ಸಂಸ್ಥೆ ಬಸ್ಸುಗಳು ಗಡಿಭಾಗ ನಿಪ್ಪಾಣಿ ತನಕ ಹೋಗಿ ಬರುತ್ತಿವೆ. ಪರಿಸ್ಥಿತಿ ಗಮನಿಸುತ್ತಿದ್ದೇವೆ. ಮತ್ತೆ ಮಾಮೂಲು ಸ್ಥಿತಿಗೆ ಬಂದ ನಂತರ ಎಂದಿನಂತೆ ಬಸ್ಸುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಡಲಾಗುವುದು ಎಂದು ಹೇಳಲಾಗಿದೆ.

ಈ ಮಧ್ಯೆ ದಾಂಧಲೆ ನಡೆಸಿದ ಹಲವರನ್ನು ಮಹಾರಾಷ್ಟ್ರ ಪೋಲೀಸರು ಬಂಧಿಸಿದ್ದಾರೆ.

You might also like
Leave a comment