This is the title of the web page

ಸಮವಸ್ತ್ರ ಧರಿಸಲು ಒತ್ತಾಯ; ಶಾಲಾ ಸಿಬ್ಬಂದಿ ಮೇಲೆ ದಾಳಿ

ಕೋಲ್ಕತ್ತಾ, 13- ಮುರ್ಷಿದಾಬಾದ ಜಿಲ್ಲೆಯ ಸುತಿ ಗ್ರಾಮದ ಶಾಲೆಯೊಂದರ ಮುಖ್ಯೋಪಾಧ್ಯಾಯರು ಕೆಲವು ವಿದ್ಯಾರ್ಥಿಗಳಿಗೆ ಬುರ್ಖಾ ಬದಲಿಗೆ ಶಾಲಾ ಸಮವಸ್ತ್ರವನ್ನು ಧರಿಸುವಂತೆ ಒತ್ತಾಯಿಸಿದಾಗ ಶಾಲೆಯ ಸಿಬ್ಬಂದಿ ಮೇಲೆ ದಾಳಿ ನಡೆಸಲಾಗಿದ್ದು ಈ ಸಂಬಂಧ 18 ಜನರನ್ನು ಬಂಧಿಸಲಾಗಿದೆ.

ಶಾಲೆಯ ಮುಖ್ಯೋಪಾಧ್ಯಾಯರು ಶುಕ್ರವಾರ ವಿದ್ಯಾರ್ಥಿಗಳಿಗೆ ಬುರ್ಖಾ ಬದಲಿಗೆ ಶಾಲಾ ಸಮವಸ್ತ್ರವನ್ನು ಧರಿಸುವಂತೆ ಹೇಳಿದ್ದರು ಎನ್ನಲಾಗಿದೆ. ಆಗ
ಮುಖ್ಯೋಪಾಧ್ಯಾಯರನ್ನು ಬದಲಿಸುವಂತೆ ಒತ್ತಾಯಿಸಿ ಶನಿವಾರ ಸ್ಥಳೀಯರ ಗುಂಪೊಂದು ಶಾಲೆಗೆ ಮುತ್ತಿಗೆ ಹಾಕಿತ್ತು.

ಹಿರಿಯ ಜಿಲ್ಲಾ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಆದರೆ ಮಧ್ಯಾಹ್ನದ ನಂತರ ಪರಿಸ್ಥಿತಿ ಹದಗೆಟ್ಟಿತು. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಬೇಕಾಯಿತು.

“18 ಜನರನ್ನು ಬಂಧಿಸಿದ್ದೇವೆ. ಇನ್ನೂ ಕೆಲವರ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಜಂಗಿಪುರದ ಪೊಲೀಸ್ ವರಿಷ್ಠಾಧಿಕಾರಿ ಭೋಲನಾಥ ಪಾಂಡೆ ಹೇಳಿದ್ದಾರೆ.

ಶಾಲಾ ಕಟ್ಟಡದೊಳಗೆ ಬೀಗ ಹಾಕಿಕೊಂಡಿದ್ದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರನ್ನು ಪೊಲೀಸರು ಸಂಜೆಯ ನಂತರ ರಕ್ಷಿಸಿದರು.

ಅಧಿಕಾರಿಗಳ ಪ್ರಕಾರ, ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

You might also like
Leave a comment