ಹಾವೇರಿ : ಬ್ಯಾಡಗಿ ಶಾಸಕ ಶಿವಣ್ಣನವರ ಆರೋಗ್ಯ ಸ್ಥಿರ
ಹಾವೇರಿ: ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬ್ಯಾಡಗಿ ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಲಘು ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಾಸಕರ ಆರೋಗ್ಯ ಸ್ಥಿರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು ಹುಬ್ಬಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಲಘು ಹೃದಯಾಘಾತ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ..



