ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ 11 ಆರೋಪಿಗಳಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ರಚನಾ, ಮಮ್ತೇಶ ಗೌಡ, ದಿಲೀಪ, ಸೋಮಶೇಖರ, ಜಾಗೃತ ಸೇರಿ 11 ಮಂದಿಯ ಜಾಮೀನು ಮಂಜೂರಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅವರನ್ನು ಬಂಧನ ಮಾಡಲಾಗಿತ್ತು. ಸರ್ಕಾರಿ ಅಧಿಕಾರಿಗಳು ಆಗದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅವರು ಬರುವುದಿಲ್ಲ. ಹೀಗಾಗಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.